Posts

Showing posts from October, 2017

ಕನಸು ತಿರುಕನ ಕನಸಾಗದಿರಲಿ ...

Image
ತಿರುಕನೋರ್ವನೂರ ಮುಂದೆ ಮುರುಕು ಧರ್ಮಶಾಲೆಯಲ್ಲಿ ಒರಗಿರುತ್ತಲೊಂದು ಕನಸ ಕಂಡನೆಂತೆನೆ...  ಕಂಡನೆಂತೆನೆ...   ಷಡಕ್ಷರಿಅವರ ಈ ಹಾಡು ಯಾರಿಗೆ ನೆನಪಿಲ್ಲ ಹೇಳಿ.. ನೀವು ಈ ಹಾಡನ್ನು ಕೇಳಿರದಿದ್ದರೆ ಈ ಹಾಡಿನ ಅರ್ಥ ಹೀಗಿದೆ ಕೇಳಿ: ಒಂದು ನಗರದಲ್ಲಿ ಒಬ್ಬ ತಿರುಕನಿದ್ದ, ದಿನವೂ ಬೇಡಿತಂದ ಹಿಟ್ಟಿನಲ್ಲಿ ಅಲ್ಪಸ್ವಲ್ಪವನ್ನು ಉಳಿಸಿ ಒಂದು ಮಣ್ಣಿನ ಪಾತ್ರೆಯಲ್ಲಿ ಶೇಖರಿಸಿ ಅದನ್ನು ಆತನಿದ್ದ ಮುರುಕಲು ಮನೆಯ ಗೋಡೆಯ ಗೂಟಕ್ಕೆ ನೇತು ಬಿಟ್ಟಿದ್ದ. ಹರಕುಮುರುಕು ಮಂಚದಲ್ಲಿ ಅಂಗಾತ ಮಲಗಿ ನಿತ್ಯವೂ ಅದನ್ನೇ ದಿಟ್ಟಿಸುತ್ತಾ ಒರಗಿರುತ್ತಿದ್ದ. ಒಮ್ಮೆ ಹೀಗೇ ಒರಗಿರುತ್ತಾ ಕನಸುಕಂಡು ಈಗೇನಾದರೂ ನಗರದಲ್ಲಿ  ಕ್ಷಾಮಬಂದರೆ ತನ್ನಲ್ಲಿರುವ ಸಂಗ್ರಹಿಸಿಟ್ಟಿದ್ದ ಹಿಟ್ಟನ್ನು ಯೋಗ್ಯ ಬೆಲೆಗೆ ಮಾರಾಟಮಾಡಿ ಎರಡು ಆಡುಗಳನ್ನು ಕೊಂಡುಕೊಳ್ಳುತ್ತೇನೆ ಎಂದುಕೊಂಡ. ಕನಸು ಮುಂದುವರಿಯಿತು....  ಆಡುಗಳು ಮರಿಹಾಕಿದವು, ಅವುಗಳನ್ನೆಲ್ಲಾ ಮಾರಿ ಹಸುಗಳನ್ನು ಕೊಂಡ, ಹಸುಗಳ ಹೈನವನ್ನೆಲ್ಲಾ ಮಾರಿ ಎಮ್ಮೆಗಳನ್ನು ಕೊಂಡ, ಎಮ್ಮೆಗಳನ್ನೆಲ್ಲಾ ಮಾರಿ ಕುದುರೆಗಳನ್ನು ಕೊಂಡ. ಕುದುರೆಗಳ ಸಂತಾನಾಭಿವೃದ್ಧಿಯಿಂದ ಅವುಗಳ ಸಂಖ್ಯಾವೃದ್ಧಿಯಾಗಿ, ಅವುಗಳನ್ನೆಲ್ಲಾ ಮಾರಿ ಭಾರೀ ಶ್ರೀಮಂತನಾಗಿ ಬಂಗಲೆಯೊಂದನ್ನು ಕಟ್ಟಿಸಿದ. ಊರಿನ ದೊಡ್ಡ ಶ್ರೀಮಂತರು ಬಂದು ತಮ್ಮ ಮಗಳನ್ನು ಕೊಡುತ್ತೇವೆ ಮದುವೆಯಾಗು ಎಂದು ಒತ್ತಾಯಿಸಿದರು. ಸುಂದರಿಯನ್ನು ಮದುವೆಯಾದ ಆತನಿಗೆ ಗಂಡುಮಗುವೊಂದ